Sunday, November 29, 2020
Home Uncategorized ಕುದುರೆ ವ್ಯಾಪಾರಕ್ಕೆ ಕಾಂಗ್ರೆಸ್ ಅನ್ವರ್ಥ ನಾಮ: ಕಾಂಗ್ರೆಸ್ನ ಪ್ರಜಾಪ್ರಭುತ್ವ ನಡೆ ಪ್ರಶ್ನಿಸಿದ ಎಚ್‍ಡಿಕೆ

ಕುದುರೆ ವ್ಯಾಪಾರಕ್ಕೆ ಕಾಂಗ್ರೆಸ್ ಅನ್ವರ್ಥ ನಾಮ: ಕಾಂಗ್ರೆಸ್ನ ಪ್ರಜಾಪ್ರಭುತ್ವ ನಡೆ ಪ್ರಶ್ನಿಸಿದ ಎಚ್‍ಡಿಕೆ

ಬೆಂಗಳೂರು: ಶಾಸಕರನ್ನು ಖರೀದಿಸಿ, ಸರ್ಕಾರಗಳನ್ನು ಉರುಳಿಸುತ್ತಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ “ಪ್ರಜಾಪ್ರಭುತ್ವ ಉಳಿಸಿ” ಎಂದು ಹೋರಾಟ ನಡೆಸುತ್ತಿದೆ. ಇದೇ ಕಾಂಗ್ರೆಸ್ ರಾಜಸ್ಥಾನದಲ್ಲಿ ಏನು ಮಾಡಿದೆ? ಸರ್ಕಾರ ರಚಿಸಲು ಬೆಂಬಲ ನೀಡಿದ ಯ ಎಲ್ಲ ಶಾಸಕರನ್ನೂ ಕಾಂಗ್ರೆಸ್ ಸೆಳೆದಿಲ್ಲವೇ? ಇದು ಖರೀದಿಯಲ್ಲವೇ? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.‌ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕುಮಾರಸ್ವಾಮಿ, ಅಚ್ಚರಿಯ ರೀತಿಯಲ್ಲಿ ಆಡಳಿತರೂಢ ಬಿಜೆಪಿಯನ್ನು ಬಿಟ್ಟು ಕಾಂಗ್ರೆಸ್ ಮೇಲೆ ಹರಿಹಾಯ್ದಿದ್ದಾರೆ. ಸರ್ಕಾರ ರಚಿಸಲು ಬೆಂಬಲ ಕೊಟ್ಟವರನ್ನೇ ಕುತಂತ್ರದಿಂದ ಸೆಳೆದುಕೊಳ್ಳುವುದು, ಇಡೀ ಪಕ್ಷವನ್ನೇ ವಿಲೀನ ಮಾಡಿಸಿಕೊಳ್ಳುವುದು ಪ್ರಜಾಪ್ರಭುತ್ವ ನಡೆಯೇ? ಸಮಾನ ಮನಸ್ಕ ಪಕ್ಷಗಳನ್ನು ಒಡೆದು ಶಾಸಕರನ್ನು ಸೆಳೆಯುತ್ತಿದ್ದರೆ ನಿಮಗೆ ಯಾರು ಬೆಂಬಲ ಕೊಟ್ಟಾರು. ಈ ತಪ್ಪುಗಳು ನಿಮಗೆ ಕಾಣುತ್ತಿಲ್ಲವೇ? ಎಂದಿದ್ದಾರೆ.

Does K'taka need a fresh budget? As Siddaramaiah disagrees with ...

2004ರ ಕಾಂಗ್ರೆಸ್-ಜೆಡಿಎಸ್ Congress-JDS ಸರ್ಕಾರದ ಅವಧಿಯಲ್ಲಿ ಇದೇ ಕಾಂಗ್ರೆಸ್ ನಮ್ಮ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡಿತ್ತು. ಇದನ್ನು ಮನಗಂಡೇ ನಾನು ಕ್ಷಿಪ್ರ ರಾಜಕೀಯ ಕ್ರಾಂತಿ ಮಾಡಬೇಕಾಯಿತು. ಪಕ್ಷಗಳನ್ನು ಒಡೆಯುವ, ಶಾಸಕರನ್ನು ಖರೀದಿಸುವ ವ್ಯವಾಹರದಲ್ಲಿ ಕಾಂಗ್ರೆಸ್ ನಿಪುಣ. ‘ಕುದುರೆ ವ್ಯಾಪಾರ’ ಎಂಬ ಭಾಷೆ ಹುಟ್ಟಿದ್ದೇ ಕಾಂಗ್ರೆಸ್ ಪಕ್ಷದಿಂದ ಎಂದು ಹೇಳಿದ್ದಾರೆ.

ಪಕ್ಷಾಂತರ ನಿಷೇಧ ಕಾಯ್ದೆ ಪರಿಣಾಮಕಾರಿಯಾಗಿಲ್ಲ.‌ ಆದ್ದರಿಂದಲೇ ಈ ಪ್ರಜಾಪ್ರಭುತ್ವ ವಿರೋಧಿ ಪ್ರಹಸನಗಳು ನಡೆಯುತ್ತಿವೆ. ಹಾಗಾಗಿ ಪಕ್ಷಾಂತರ ಮಾಡಿದ ವ್ಯಕ್ತಿ, ಆತನ ಕುಟುಂಬಕ್ಕೆ 2 ಅವಧಿಗೆ ಚುನಾವಣೆ ನಿರ್ಬಂಧಿಸುವ ಮತ್ತು ಈ ಅವಧಿಯಲ್ಲಿ ಯಾವುದೇ ಅಧಿಕಾರ ಹೊಂದದಂತೆ ಮಾಡುವುದು ಸೂಕ್ತ. ಇದರತ್ತ ಚರ್ಚೆಗಳಾದರೂ ನಡೆಯಲಿ. ಪ್ರಜಾಪ್ರಭುತ್ವ ಉಳಿಯಲಿ ಎಂಬ ಸಲಹೆ ನೀಡಿದ್ದಾರೆ.

ಜನರ ಪ್ರಾಣದ ಜೊತೆ ಚೆಲ್ಲಾಟ ಆಡುವುದನ್ನು ನಿಲ್ಲಿಸಿ: ರಾಜ್ಯ ಸರ್ಕಾರಕ್ಕೆ ಎಚ್.ಡಿ. ಕುಮಾರಸ್ವಾಮಿ ಒತ್ತಾಯ
ಪ್ರಜಾಪ್ರಭುತ್ವ ಉಳಿಸಲು ಪ್ರಾಣ ನೀಡುವುದಾಗಿ ಕಾಂಗ್ರೆಸ್‌ ಪ್ರತಿಭಟನೆಯಲ್ಲಿ ಮಾಜಿ ಸಿಎಂ ಹೇಳುತ್ತಿದ್ದರು. ಸ್ವಾಮಿ, ಜೀವ ಅಮೂಲ್ಯ. ನೀವು ಪ್ರಾಣ ಕೊಡುವುದು ಬೇಡ. ಕಾಂಗ್ರೆಸ್‌ ನಡೆದು ಬಂದ ದಾರಿಯನ್ನು ಒಂದು ಬಾರಿ ನೆನಪಿಸಿಕೊಳ್ಳಿ. ನಂತರ ಪಕ್ಷಾಂತರ ನಿಷೇಧ ಕಾಯ್ದೆಯನ್ನು ಸದೃಢಗೊಳಿಸುವತ್ತ ಚಿಂತನೆ ಮಾಡಿ. ಪ್ರಜಾಪ್ರಭುತ್ವ ತಂತಾನೆ ಉಳಿಯುತ್ತದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

Most Popular

ಕುದುರೆ ವ್ಯಾಪಾರಕ್ಕೆ ಕಾಂಗ್ರೆಸ್ ಅನ್ವರ್ಥ ನಾಮ: ಕಾಂಗ್ರೆಸ್ನ ಪ್ರಜಾಪ್ರಭುತ್ವ ನಡೆ ಪ್ರಶ್ನಿಸಿದ ಎಚ್‍ಡಿಕೆ

ಬೆಂಗಳೂರು: ಶಾಸಕರನ್ನು ಖರೀದಿಸಿ, ಸರ್ಕಾರಗಳನ್ನು ಉರುಳಿಸುತ್ತಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ "ಪ್ರಜಾಪ್ರಭುತ್ವ ಉಳಿಸಿ" ಎಂದು ಹೋರಾಟ ನಡೆಸುತ್ತಿದೆ. ಇದೇ ಕಾಂಗ್ರೆಸ್ ರಾಜಸ್ಥಾನದಲ್ಲಿ ಏನು ಮಾಡಿದೆ? ಸರ್ಕಾರ ರಚಿಸಲು ಬೆಂಬಲ...

ಕೊರೊನಾ ಸೋಂಕಿನ ಜೊತೆಗೆ ಭ್ರಷ್ಟಾಚಾರದ ಸೋಂಕು ಹೆಚ್ಚಿದೆ; ಹೆಣದ ಮೇಲೆ ಹಣ ಲೂಟಿ: ಡಿ.ಕೆ. ಶಿವಕುಮಾರ್

ಬೆಂಗಳೂರು: ಕೊರೋನಾ ಸೋಂಕು ಜೊತೆಗೆ ಭ್ರಷ್ಟಾಚಾರದ ಸೋಂಕು ಸಹ ವ್ಯಾಪಕವಾಗಿ ಹರಡಿದ್ದು, ಹೆಣದ ಮೇಲೆ ಹಣ ಮಾಡಲು ರಾಜ್ಯ ಬಿಪೆಪಿ ಸರ್ಕಾರ ಹೊರಟಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.

ಅಮೆರಿಕಾದಲ್ಲಿ ಮುಂದುವರೆದ ಕೊರೋನಾ ಅಬ್ಬರ: 24 ಗಂಟೆಗಳಲ್ಲಿ 63,937 ಮಂದಿಯಲ್ಲಿ ಸೋಂಕು ಪತ್ತೆ

ವಾಷಿಂಗ್ಟನ್: ಇಡೀ ವಿಶ್ವಕ್ಕೆ ಕಂಟಕವಾಗಿ ಪರಿಣಮಿಸಿರುವ ಕೊರೋನಾ ವೈರಸ್ ವಿಶ್ವದ ದೊಡ್ಡಣ್ಣ ಅಮೆರಿಕಾವನ್ನು ಬೆನ್ನು ಬಿಡದಂತೆ ಕಾಡುತ್ತಿದ್ದು, ಇದರಂತೆ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 63,937 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ...

ವಿಜಯ್ ಮಲ್ಯ ಹಸ್ತಾಂತರದ ನಿಖರ ಸಮಯ ಹೇಳಲು ಸಾಧ್ಯವಿಲ್ಲ: ಯುಕೆ ರಾಯಭಾರಿ

ನವದೆಹಲಿ: ದೇಶಭ್ರಷ್ಟರಾಗಿರುವ ಉದ್ಯಮಿ ವಿಜಯ್ ಮಲ್ಯರನ್ನು ಭಾರತಕ್ಕೆ ಹಸ್ತಾಂತರಿಸಲು  ಯುಕೆ ಸರ್ಕಾರವು ಸಮಯವನ್ನು ನಿಗದಿಪಡಿಸಲು ಸಾಧ್ಯವಿಲ್ಲ, ಆದರೆ ಅಪರಾಧಿಗಳು ರಾಷ್ಟ್ರದ ಗಡಿ ದಾಟಿ ಹೋಗುವ ಮೂಲಕ ಶಿಕ್ಷೆಯಿಂದ ತಪ್ಪಿಸಿಕೊಳ್ಲಲು ಸಹ...

Recent Comments