Sunday, November 29, 2020
Home Blog

ಕುದುರೆ ವ್ಯಾಪಾರಕ್ಕೆ ಕಾಂಗ್ರೆಸ್ ಅನ್ವರ್ಥ ನಾಮ: ಕಾಂಗ್ರೆಸ್ನ ಪ್ರಜಾಪ್ರಭುತ್ವ ನಡೆ ಪ್ರಶ್ನಿಸಿದ ಎಚ್‍ಡಿಕೆ

0

ಬೆಂಗಳೂರು: ಶಾಸಕರನ್ನು ಖರೀದಿಸಿ, ಸರ್ಕಾರಗಳನ್ನು ಉರುಳಿಸುತ್ತಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ “ಪ್ರಜಾಪ್ರಭುತ್ವ ಉಳಿಸಿ” ಎಂದು ಹೋರಾಟ ನಡೆಸುತ್ತಿದೆ. ಇದೇ ಕಾಂಗ್ರೆಸ್ ರಾಜಸ್ಥಾನದಲ್ಲಿ ಏನು ಮಾಡಿದೆ? ಸರ್ಕಾರ ರಚಿಸಲು ಬೆಂಬಲ ನೀಡಿದ ಯ ಎಲ್ಲ ಶಾಸಕರನ್ನೂ ಕಾಂಗ್ರೆಸ್ ಸೆಳೆದಿಲ್ಲವೇ? ಇದು ಖರೀದಿಯಲ್ಲವೇ? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.‌ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕುಮಾರಸ್ವಾಮಿ, ಅಚ್ಚರಿಯ ರೀತಿಯಲ್ಲಿ ಆಡಳಿತರೂಢ ಬಿಜೆಪಿಯನ್ನು ಬಿಟ್ಟು ಕಾಂಗ್ರೆಸ್ ಮೇಲೆ ಹರಿಹಾಯ್ದಿದ್ದಾರೆ. ಸರ್ಕಾರ ರಚಿಸಲು ಬೆಂಬಲ ಕೊಟ್ಟವರನ್ನೇ ಕುತಂತ್ರದಿಂದ ಸೆಳೆದುಕೊಳ್ಳುವುದು, ಇಡೀ ಪಕ್ಷವನ್ನೇ ವಿಲೀನ ಮಾಡಿಸಿಕೊಳ್ಳುವುದು ಪ್ರಜಾಪ್ರಭುತ್ವ ನಡೆಯೇ? ಸಮಾನ ಮನಸ್ಕ ಪಕ್ಷಗಳನ್ನು ಒಡೆದು ಶಾಸಕರನ್ನು ಸೆಳೆಯುತ್ತಿದ್ದರೆ ನಿಮಗೆ ಯಾರು ಬೆಂಬಲ ಕೊಟ್ಟಾರು. ಈ ತಪ್ಪುಗಳು ನಿಮಗೆ ಕಾಣುತ್ತಿಲ್ಲವೇ? ಎಂದಿದ್ದಾರೆ.

Does K'taka need a fresh budget? As Siddaramaiah disagrees with ...

2004ರ ಕಾಂಗ್ರೆಸ್-ಜೆಡಿಎಸ್ Congress-JDS ಸರ್ಕಾರದ ಅವಧಿಯಲ್ಲಿ ಇದೇ ಕಾಂಗ್ರೆಸ್ ನಮ್ಮ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡಿತ್ತು. ಇದನ್ನು ಮನಗಂಡೇ ನಾನು ಕ್ಷಿಪ್ರ ರಾಜಕೀಯ ಕ್ರಾಂತಿ ಮಾಡಬೇಕಾಯಿತು. ಪಕ್ಷಗಳನ್ನು ಒಡೆಯುವ, ಶಾಸಕರನ್ನು ಖರೀದಿಸುವ ವ್ಯವಾಹರದಲ್ಲಿ ಕಾಂಗ್ರೆಸ್ ನಿಪುಣ. ‘ಕುದುರೆ ವ್ಯಾಪಾರ’ ಎಂಬ ಭಾಷೆ ಹುಟ್ಟಿದ್ದೇ ಕಾಂಗ್ರೆಸ್ ಪಕ್ಷದಿಂದ ಎಂದು ಹೇಳಿದ್ದಾರೆ.

ಪಕ್ಷಾಂತರ ನಿಷೇಧ ಕಾಯ್ದೆ ಪರಿಣಾಮಕಾರಿಯಾಗಿಲ್ಲ.‌ ಆದ್ದರಿಂದಲೇ ಈ ಪ್ರಜಾಪ್ರಭುತ್ವ ವಿರೋಧಿ ಪ್ರಹಸನಗಳು ನಡೆಯುತ್ತಿವೆ. ಹಾಗಾಗಿ ಪಕ್ಷಾಂತರ ಮಾಡಿದ ವ್ಯಕ್ತಿ, ಆತನ ಕುಟುಂಬಕ್ಕೆ 2 ಅವಧಿಗೆ ಚುನಾವಣೆ ನಿರ್ಬಂಧಿಸುವ ಮತ್ತು ಈ ಅವಧಿಯಲ್ಲಿ ಯಾವುದೇ ಅಧಿಕಾರ ಹೊಂದದಂತೆ ಮಾಡುವುದು ಸೂಕ್ತ. ಇದರತ್ತ ಚರ್ಚೆಗಳಾದರೂ ನಡೆಯಲಿ. ಪ್ರಜಾಪ್ರಭುತ್ವ ಉಳಿಯಲಿ ಎಂಬ ಸಲಹೆ ನೀಡಿದ್ದಾರೆ.

ಜನರ ಪ್ರಾಣದ ಜೊತೆ ಚೆಲ್ಲಾಟ ಆಡುವುದನ್ನು ನಿಲ್ಲಿಸಿ: ರಾಜ್ಯ ಸರ್ಕಾರಕ್ಕೆ ಎಚ್.ಡಿ. ಕುಮಾರಸ್ವಾಮಿ ಒತ್ತಾಯ
ಪ್ರಜಾಪ್ರಭುತ್ವ ಉಳಿಸಲು ಪ್ರಾಣ ನೀಡುವುದಾಗಿ ಕಾಂಗ್ರೆಸ್‌ ಪ್ರತಿಭಟನೆಯಲ್ಲಿ ಮಾಜಿ ಸಿಎಂ ಹೇಳುತ್ತಿದ್ದರು. ಸ್ವಾಮಿ, ಜೀವ ಅಮೂಲ್ಯ. ನೀವು ಪ್ರಾಣ ಕೊಡುವುದು ಬೇಡ. ಕಾಂಗ್ರೆಸ್‌ ನಡೆದು ಬಂದ ದಾರಿಯನ್ನು ಒಂದು ಬಾರಿ ನೆನಪಿಸಿಕೊಳ್ಳಿ. ನಂತರ ಪಕ್ಷಾಂತರ ನಿಷೇಧ ಕಾಯ್ದೆಯನ್ನು ಸದೃಢಗೊಳಿಸುವತ್ತ ಚಿಂತನೆ ಮಾಡಿ. ಪ್ರಜಾಪ್ರಭುತ್ವ ತಂತಾನೆ ಉಳಿಯುತ್ತದೆ ಎಂದಿದ್ದಾರೆ.

ಕೊರೊನಾ ಸೋಂಕಿನ ಜೊತೆಗೆ ಭ್ರಷ್ಟಾಚಾರದ ಸೋಂಕು ಹೆಚ್ಚಿದೆ; ಹೆಣದ ಮೇಲೆ ಹಣ ಲೂಟಿ: ಡಿ.ಕೆ. ಶಿವಕುಮಾರ್

0

ಬೆಂಗಳೂರು: ಕೊರೋನಾ ಸೋಂಕು ಜೊತೆಗೆ ಭ್ರಷ್ಟಾಚಾರದ ಸೋಂಕು ಸಹ ವ್ಯಾಪಕವಾಗಿ ಹರಡಿದ್ದು, ಹೆಣದ ಮೇಲೆ ಹಣ ಮಾಡಲು ರಾಜ್ಯ ಬಿಪೆಪಿ ಸರ್ಕಾರ ಹೊರಟಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ನಿಯಂತ್ರಣಕ್ಕೆ ಸರ್ಕಾರ ನಮ್ಮ ಬಳಿ ಸಹಕಾರ ಕೇಳಿತ್ತು. ನಾವು ಎಲ್ಲ ರೀತಿಯ ಬೆಂಬಲ ಕೊಟ್ಟಿದ್ದೇವೆ. ಸರ್ಕಾರದ ಆಟಗಳನ್ನೆಲ್ಲ 120 ದಿನ ಸಹಿಸಿಕೊಂಡಿದ್ದೇವೆ. ಆದರೆ ಸರ್ಕಾರ ಹೆಣದ ಮೇಲೆ ಹಣ ಮಾಡಲು ಹೊರಟಿದೆ. ಬೆಂಗಳೂರು ಉಸ್ತುವಾರಿಗೆ ನಿಯೋಝನೆಗೊಂಡಿರುವ 9 ಸಚಿವರು ಏನು ಮಾಡುತ್ತಿದ್ದಾರೆ ಎಂಬುದೇ ತಿಳಿಯುತ್ತಿಲ್ಲ. ಒಬ್ಬ ಮಂತ್ರಿಯೂ ಆಸ್ಪತ್ರೆಗೆ ಹೋಗಿ ಸೋಂಕಿತರನ್ನು ವಿಚಾರಿಸಲಿಲ್ಲ. ಸೋಂಕಿಗೆ ತುತ್ತಾದವರಿಗೆ ಧೈರ್ಯ ತುಂಬಲಿಲ್ಲ. ಸತ್ತವರನ್ನು ಕೀಳಾಗಿ ನೋಡಿಕೊಳ್ಳಲಾಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ

ಈ ಸರ್ಕಾರಕ್ಕೆ ಯಾವುದೇ ಸ್ಪಷ್ಡ ಗುರಿ ಇಲ್ಲ. ಇದು ಕೇವಲ ಭ್ರಷ್ಟಚಾರದ ಸರ್ಕಾರ.ನಾವು ಸರ್ವ ಪಕ್ಷದ ಸಭೆ ಕರೆಯುವಂತೆ ಒತ್ತಾಯಿಸಿದ ಮೇಲೆ ನೆಪಮಾತ್ರಕ್ಕೆ ಸಭೆ ಕರೆದರು. ಸರ್ಕಾರದ ಆಹಾರದ ಕಿಟ್ ಗಳ ಮೇಲೆ ಬಿಜೆಪಿ ನಾಯಕರು ತಮ್ಮ ಹೆಸರು ನಮೂದಿಸಿ ಕಿಟ್ ಹಂಚಿದ್ದಾರೆ. ಕಾರ್ಮಿಕರಿಗೆ 1200 ರೂ ಕೊಟ್ಟು ಊಟ ಒದಗಿಸಿರುವುದಾಗಿ ಲೆಕ್ಕ ನೀಡಿದ್ದಾರೆ. ಯಾವ ಫೈವ್ ಸ್ಟಾರ್ ಹೋಟೆಲ್ ನಿಂದ ಊಟ ಕಳಿಸಿದ್ದೀರಿ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಶಿವಕುಮಾರ್ ಕುಟುಕಿದರು. 

ಕಾರ್ಮಿಕರನ್ನು ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ. 110 ದಿನ ಆದ ಮೇಲೆ ಖಾಸಗಿ ಆಸ್ಪತ್ರೆಯವರನ್ನು ಕರೆದು ಮಾತನಾಡುತ್ತಿದ್ದಾರೆ. ಶಿಕ್ಷಣ ವ್ಯವಸ್ಥೆ ಯ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ವೃತ್ತಿಪರರಿಗೆ 5000 ರೂ. ಕೊಡುವುದಾಗಿ ಹೇಳಿದ್ದರು. ಆದರೆ ಪರಿಹಾರ ಶೇ. 10 ರಷ್ಟು ಜನರಿಗೆ ತಲುಪಿಲ್ಲ. ಆಶಾ ಕಾರ್ಯಕರ್ತೆಯರಿಗೆ ಸಂಬಳ ಕೊಡಲು ಆಗುತ್ತಿಲ್ಲ. ಅಲ್ಲದೇ ಪ್ರತಿಭಟನಾನಿರತರನ್ನು ಕರೆದು ಮಾತನಾಡುವ ಸೌಜನ್ಯವೂ ಈ ಸರ್ಕಾರಕ್ಕೆ ಇಲ್ಲ.ಪೌರ ಕಾರ್ಮಿಕರಿಗೆ ಜೀವನದ ರಕ್ಷಣೆಯಿಲ್ಲ. 

ಅಮೆರಿಕಾದಲ್ಲಿ ಮುಂದುವರೆದ ಕೊರೋನಾ ಅಬ್ಬರ: 24 ಗಂಟೆಗಳಲ್ಲಿ 63,937 ಮಂದಿಯಲ್ಲಿ ಸೋಂಕು ಪತ್ತೆ

0

ವಾಷಿಂಗ್ಟನ್: ಇಡೀ ವಿಶ್ವಕ್ಕೆ ಕಂಟಕವಾಗಿ ಪರಿಣಮಿಸಿರುವ ಕೊರೋನಾ ವೈರಸ್ ವಿಶ್ವದ ದೊಡ್ಡಣ್ಣ ಅಮೆರಿಕಾವನ್ನು ಬೆನ್ನು ಬಿಡದಂತೆ ಕಾಡುತ್ತಿದ್ದು, ಇದರಂತೆ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 63,937 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಹೊಸದಾಗಿ 63,937 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ರಾಷ್ಟ್ರದಲ್ಲಿ ಈ ವರೆಗೂ ಸೋಂಕಿತರ ಸಂಖ್ಯೆ 4,100,875ಕ್ಕೆ ಏರಿಕೆಯಾಗಿದೆ. 

ಮಹಾಮಾರಿ ವೈರಸ್ ಅಮೆರಿಕಾದಲ್ಲಿ ಈ ವರೆಗೂ 146,183 ಮಂದಿಯನ್ನು ಬಲಿಪಡೆದುಕೊಂಡಿದ್ದು, 4,100,875 ಮಂದಿ ಸೋಂಕಿತರ ಪೈಕಿ 2,012,055 ಮಂದಿ ಸೋಂಕಿನಿಂದ ಇನ್ನೂ ಬಳಲುತ್ತಿದ್ದಾರೆಂದು ತಿಳಿದುಬಂದಿದೆ. 

ಇದರಂತೆ 1,942,637 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ನಡುವೆ ಚಿಕಿತ್ಸೆ ಪಡೆಯುತ್ತಿರುವ 2,012,055 ಮಂದಿ ಪೈಕಿ 19,179 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. 

ವಿಜಯ್ ಮಲ್ಯ ಹಸ್ತಾಂತರದ ನಿಖರ ಸಮಯ ಹೇಳಲು ಸಾಧ್ಯವಿಲ್ಲ: ಯುಕೆ ರಾಯಭಾರಿ

0

ನವದೆಹಲಿ: ದೇಶಭ್ರಷ್ಟರಾಗಿರುವ ಉದ್ಯಮಿ ವಿಜಯ್ ಮಲ್ಯರನ್ನು ಭಾರತಕ್ಕೆ ಹಸ್ತಾಂತರಿಸಲು  ಯುಕೆ ಸರ್ಕಾರವು ಸಮಯವನ್ನು ನಿಗದಿಪಡಿಸಲು ಸಾಧ್ಯವಿಲ್ಲ, ಆದರೆ ಅಪರಾಧಿಗಳು ರಾಷ್ಟ್ರದ ಗಡಿ ದಾಟಿ ಹೋಗುವ ಮೂಲಕ ಶಿಕ್ಷೆಯಿಂದ ತಪ್ಪಿಸಿಕೊಳ್ಲಲು ಸಹ ಸಾಧ್ಯವಾಗುವುದಿಲ್ಲ ಎಂದು  ಬ್ರಿಟಿಷ್ ಹೈಕಮಿಷನರ್ ಸರ್ ಫಿಲಿಪ್ ಬಾರ್ಟನ್ ಗುರುವಾರ ಹೇಳಿದ್ದಾರೆ.

 ಆನ್‌ಲೈನ್ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಬಾರ್ಟನ್ ಅವರಿಗೆ ಮಲ್ಯ ಯುಕೆ ಯಲ್ಲಿ ಆಶ್ರಯ ಕೋರಿದ್ದಾರೆಯೆ? ಎಂದು ಪ್ರಶ್ನಿಸಲಾಗಿ ಅವರು ತನ್ನ ಸರ್ಕಾರವು ಅಂತಹ ವಿಷಯಗಳ ಬಗ್ಗೆ ಎಂದಿಗೂ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದರು.

“ಯುಕೆ ಸರ್ಕಾರ ಮತ್ತು ಸರ್ಕಾರದಿಂದ ಸ್ವತಂತ್ರವಾಗಿರುವ ನ್ಯಾಯಾಲಯಗಳು, ಜನರು ಬೇರೆ ದೇಶಕ್ಕೆ ಹೋಗುವುದರ ಮೂಲಕ ಶಿಕ್ಷೆಯಿಂದ ತಪ್ಪಿಸಿಕೊಳ್ಲುವುದನ್ನು ತಡೆಯುವಲ್ಲಿ ತಮ್ಮ ಪಾತ್ರದ ಬಗ್ಗೆ ಸಂಪೂರ್ಣವಾಗಿ ಸ್ಪಷ್ಟ ನಿಲುವನ್ನು ಹೊಂದಿದೆ. . ಯಾವುದೇ ಸಂದರ್ಭದಲ್ಲಿ ನಮ್ಮ ಪಾತ್ರವನ್ನು ವಹಿಸಲು ನಾವೆಲ್ಲರೂ ದೃಢನಿಶ್ಚಯವನ್ನು ಹೊಂದಿದ್ದೇವೆ ರಾಷ್ಟ್ರದ  ಗಡಿಗಳನ್ನು ದಾಟುವ ಮೂಲಕ ಅಪರಾಧಿಗಳು ಶಿಕ್ಷೆಯಿಂದ  ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಖಚಿತಪಡಿಸಿಕೊಳ್ಳಲು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ” ಅವರು ಹೇಳಿದ್ದಾರೆ.

ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸುವ ಸಂಬಂಧ ನಡೆಯುತ್ತಿರುವ ಕಾನೂನು ಪ್ರಕರಣದಲ್ಲಿ ಯುಕೆ ಯಾವ ಹೊಸ ಬದಲಾವಣೆ ಹೊಂದಿಲ್ಲ ಎಂದು ಅವರು ಹೇಳಿದರು.”ವಿಜಯ್ ಮಲ್ಯ ಅವರನ್ನು ಹಸ್ತಾಂತರಿಸುವುದಕ್ಕಾಗಿ ನಡೆಯುತ್ತಿರುವ ಕಾನೂನು ಪ್ರಕರಣದ ಕುರಿತು ಹೆಚ್ಚಿನ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ. ಸಮಯದ ಮಿತಿಯ ಬಗ್ಗೆ  ನಾನು ಏನನ್ನೂ ಹೇಳಲಾರೆ” ಎಂದು ಬಾರ್ಟರ್ ಹೇಳಿದ್ದಾರೆ.  ಅದೇ ಸಮಯದಲ್ಲಿ, ಹೊಸದಾಗಿ ನೇಮಕಗೊಂಡ ರಾಯಭಾರಿ ಯುಕೆ ಸರ್ಕಾರವು ಈ ಪ್ರಕರಣಕ್ಕೆ ಭಾರತವು ನೀಡುವ ಪ್ರಾಮುಖ್ಯತೆಯನ್ನು ಅರಿತಿದೆ ಎಂದೂ ನುಡಿದರು.

ರಾಜ್ಯದಲ್ಲಿ ಹೆಚ್ಚಿದ ಕೊರೋನಾ ಅಬ್ಬರ: 10 ದಿನದಲ್ಲಿ ಸೋಂಕಿತರ ಸಂಖ್ಯೆ ದ್ವಿಗುಣ!

0

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಆರ್ಭಟ ಹೆಚ್ಚಾಗುತ್ತಲೇ ಇದ್ದು, ಇದೀಗ ಅತೀ ವೇಗವಾಗಿ ಸೋಂಕಿತರ ಸಂಖ್ಯೆ ದ್ವಿಗುಣಗೊಳ್ಳುತ್ತಿರುವ ರಾಜ್ಯಗಳಾದ ಆಂಧ್ರಪ್ರದೇಶ ಹಾಗೂ ಮೇಘಾಲಯಗಳ ಸಾಲಿಗೆ ಇದೀಗ ಕರ್ನಾಟಕ ಕೂಡ ಸೇರಿಕೊಂಡಂತಾಗಿದೆ. ರಾಜ್ಯದಲ್ಲಿ ಕೇವಲ 10 ದಿನದಲ್ಲಿಯೇ ಸೋಂಕಿತರ ಸಂಖ್ಯೆ ದ್ವಿಗುಣಗೊಳ್ಳುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದೆ. 

ರಾಜ್ಯ ವಾರ್ ರೂಮ್ ನೀಡಿರುವ ಪ್ರಕಾರ, ಸೋಂಕಿತರ ಸಂಖ್ಯೆ ತಮಿಳುನಾಡು ರಾಜ್ಯದಲ್ಲಿ 2 ದಿನಗಳು, ಮಹಾರಾಷ್ಟ್ರದಲ್ಲಿ 21 ದಿನಗಳು ಹಾಗೂ ದೆಹಲಿಯಲ್ಲಿ 29 ದಿನಗಳು ದ್ವಿಗುಣಗೊಳ್ಳಲು ಕಾಲಾವಕಾಶ ತೆಗೆದುಕೊಳ್ಳುತ್ತಿದ್ದರೆ, ರಾಜ್ಯದಲ್ಲಿ ಕೇವಲ 10 ದಿನದಲ್ಲಿ ದ್ವಿಗುಣಗೊಳ್ಳುತ್ತಿದೆ ಎಂದು ಹೇಳಿದೆ. 

ಸೋಂಕಿತರ ಸಂಖ್ಯೆ ದ್ವಿಗುಣಗೊಳ್ಳುತ್ತಿರುವುದು ರಾಜ್ಯದಲ್ಲಿ ಜನರು ಎಷ್ಟರ ಮಟ್ಟಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿದ್ದಾರೆ, ಮಾಸ್ಕ್ ಗಳನ್ನು ಎಷ್ಟರ ಮಟ್ಟಿದೆ ಧರಿಸುತ್ತಿದ್ದಾರೆಂಬುದನ್ನು ತೋರಿಸುತ್ತದೆ. ಸೋಂಕಿತರ ಸಂಖ್ಯೆಯಲ್ಲಿ ರಾಜ್ಯವು 11ನೇ ಸ್ಥಾನವನ್ನು ಪಡೆದುಕೊಂಡಿದ್ದು, ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ, ರಾಜ್ಯದಲ್ಲಿ 16 ದಿನಗಳಿಗೊಮ್ಮೆ ಸೋಂಕಿತರ ಸಂಖ್ಯೆ ದ್ವಿಗುಣಗೊಳ್ಳುತ್ತಿತ್ತು. ನಂತರ ಬಳಿಕ 15 ದಿನಗಳಿಗೊಮ್ಮೆ ಇಳಿಯಿತು. ಇದೀಗ 9 ದಿನಗಳಿಗೆ ತಲುಪಿದೆಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ನೋಡಲ್ ಅಧಿಕಾರಿ ಡಾ.ಸಿಎನ್ ಮಂಜುನಾಥಅ ಅವರು ಮಾತನಾಡಿ, ದ್ವಿಗುಣಗೊಳ್ಳುತ್ತಿರುವ ಸಂಖ್ಯೆಯು ವೈರಸ್ ಸಮುದಾಯ ಹಂತವನ್ನು ತಲುಪಿರುವುದನ್ನು ಸೂಚಿಸುತ್ತದೆ. ಕೇವಲ 10-15 ದಿನಗಳಲ್ಲಿ 15,000 ಇದ್ದ ಪರೀಕ್ಷೆಗಳ ಸಂಖ್ಯೆ ಇದೀಗ 35,000ಕ್ಕೆ ಏರಿಕೆಯಾಗಿದೆ. ಪರೀಕ್ಷೆಗಳ ಸಂಖ್ಯೆ ಹೆಚ್ಚಳವಾಗದೆ ಸೋಂಕಿತರ ಸಂಖ್ಯೆ ದ್ವಿಗುಣಗೊಂಡರೆ, ಅದು ದೊಡ್ಡ ಸಮಸ್ಯೆಯಾಗಿ ಪರಿಣಮಿಸುತ್ತದೆ. ನಾವು ಇದೀಗ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸಿದ್ದಾರೆ ಎಂದು ತಿಳಿಸಿದ್ದಾರೆ. 

Hello world!

1

Welcome to WordPress. This is your first post. Edit or delete it, then start writing!