ವಾಷಿಂಗ್ಟನ್: ಇಡೀ ವಿಶ್ವಕ್ಕೆ ಕಂಟಕವಾಗಿ ಪರಿಣಮಿಸಿರುವ ಕೊರೋನಾ ವೈರಸ್ ವಿಶ್ವದ ದೊಡ್ಡಣ್ಣ ಅಮೆರಿಕಾವನ್ನು ಬೆನ್ನು ಬಿಡದಂತೆ ಕಾಡುತ್ತಿದ್ದು, ಇದರಂತೆ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 63,937 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಹೊಸದಾಗಿ 63,937 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ರಾಷ್ಟ್ರದಲ್ಲಿ ಈ ವರೆಗೂ ಸೋಂಕಿತರ ಸಂಖ್ಯೆ 4,100,875ಕ್ಕೆ ಏರಿಕೆಯಾಗಿದೆ.
ಮಹಾಮಾರಿ ವೈರಸ್ ಅಮೆರಿಕಾದಲ್ಲಿ ಈ ವರೆಗೂ 146,183 ಮಂದಿಯನ್ನು ಬಲಿಪಡೆದುಕೊಂಡಿದ್ದು, 4,100,875 ಮಂದಿ ಸೋಂಕಿತರ ಪೈಕಿ 2,012,055 ಮಂದಿ ಸೋಂಕಿನಿಂದ ಇನ್ನೂ ಬಳಲುತ್ತಿದ್ದಾರೆಂದು ತಿಳಿದುಬಂದಿದೆ.
ಇದರಂತೆ 1,942,637 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ನಡುವೆ ಚಿಕಿತ್ಸೆ ಪಡೆಯುತ್ತಿರುವ 2,012,055 ಮಂದಿ ಪೈಕಿ 19,179 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.